ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಶಾಂತಿನಿಲಯ ನಿವಾಸಿ, ಪ್ರಗತಿಪರ ಕೃಷಿಕ ಸನತ್ ಕುಮಾರ್ ಜೈನ್ ಹಿರ್ಣಿ(69) ಇವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ. ಇವರು ರಾಯಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಿರಿಯ ಸದಸ್ಯರಾಗಿ, ಕೃಷಿ ಮತ್ತು ಹೈನುಗಾರಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಕೊಯಿಲ ಮನೆ ಸಮೀಪದ ತೋಟದಲ್ಲಿ ಮಂಗಳವಾರ ಬೆಳಿಗ್ಗೆ ನೆರವೇರಿತು. ಕೊಯಿಲ ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಿದರು.
ಭೇಟಿ:
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಜಿಲ್ಲಾ ಪಂಚಾಯಿತಿ ಅಭ್ಯರ್ಥಿಗಳಾದ ಎಂ.ತುಂಗಪ್ಪ ಬಂಗೇರ, ಕೆ.ಮಾಯಿಲಪ್ಪ ಸಾಲಿಯಾನ್ ಮತ್ತಿತರ ಗಣ್ಯರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.
