ಬಂಟ್ವಾಳ; ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೇಶ್ವಾಲ್ಯ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಸೇರ ಎಂಬಲ್ಲಿನ ನಿವಾಸಿ  ರೀಟಾ ಕ್ರಾಸ್ತಾ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಕಳೆದ  ಕೆಲದಿನಗಳಿಂದ ಇವರು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಔಷಧಿಮಾಡಿಸಿದರೂ ಗುಣಮುಖರಾಗಿರಲಿಲ್ಲ. ಈ ನಡುವೆ  ಬುಧವಾರ ಇವರು ಆಯವುದೇ ವಿಷಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಮೃತರ ಪುತ್ರ ಸಂತೋಷ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

By suddi9

Leave a Reply

Your email address will not be published. Required fields are marked *