ಅರ್ಜಿ ಆಹ್ವಾನ :

 ಆರ್ಥಿಕವಾಗಿ ಹಿಂದುಳಿದ ಮತ್ತು ನಾನಾ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿ ಗಳ ಶಿಕ್ಷಣಕ್ಕೆ ನೆರವಾಗುವನ್ವಯ ರಾಮಕೃಷ್ಣ ತಪೋವನ ಬಾಲಕಾಶ್ರಮವು  ಅರ್ಜಿ ಆಹ್ವಾನಿಸಿದೆ.

ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಗಳ, 7ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 8ನೇ ತರಗತಿಗೆ ಸೇರಬಹುದು. ಉಚಿತ ಶಿಕ್ಷಣ, ಊಟ ಮತ್ತು ವಸತಿ ಒದಗಿಸಲಾಗುವುದು. ಜೊತೆಗೆ ಭಜನೆ, ಸಂಗೀತ, ಯಕ್ಷಗಾನ, ಯೋಗ ತರಗತಿ, ತೋಟಗಾರಿಕೆ, ಕಂಪ್ಯೂಟರ್, ಶ್ರಮಸೇವೆ, ಭರತನಾಟ್ಯಂ ಇತ್ಯಾದಿ ತರಬೇತಿ ನೀಡಲಾಗುತ್ತದೆ. ಸುಂದರ ಹಳ್ಳಿಯ ಪರಿಸರದಲ್ಲಿ ಈ ಬಾಲಕಾಶ್ರಮವಿದ್ದು, ಆಸಕ್ತ ವಿದ್ಯಾರ್ಥಿಗಳು 7ನೇ ತರಗತಿಯ ಪರೀಕ್ಷೆ ಮುಗಿದ ಕೂಡಲೇ ವೈಯಕ್ತಿಕ ವಿವರಗಳೊಂದಿಗೆ ಫೋನ್ ಇಲ್ಲವೇ ಅಂಚೆಯ ಮೂಲಕ ಸಂಪರ್ಕಿಸಬಹುದು. ಬಾಲಕಾಶ್ರಮದ ಪರಿಚಯ- ಮಾಹಿತಿಗಾಗಿ ವಿದ್ಯಾರ್ಥಿಗಳು ಒಂದು ವಾರ ಬಾಲಕಾಶ್ರಮದಲ್ಲಿ ಉಳಿದುಕೊಳ್ಳಬೇಕಾಗುತ್ತದೆ. ಮಕ್ಕಳ ಮೇಲ್ವಿಚಾರಣೆಯನ್ನು ಸ್ವತಃ ಸ್ವಾಮೀಜಿಯವರೇ ವಹಿಸಿಕೊಳ್ಳುವರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ-
ರಾಮಕೃಷ್ಣ ತಪೋವನ,
ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬಳಿ,
ಕರಿಯಂಗಳ ಗ್ರಾಮ, ಪೊಳಲಿ ಅಂಚೆ,
ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ-574 219
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:-
9845165108, 0824-2016455, 2266655,

By suddi9

Leave a Reply

Your email address will not be published. Required fields are marked *