ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ. ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ಹೈಕೋರ್ಟು ತಡೆಯಾಜ್ಞೆ ನೀಡಿ ಆದೇಶಿಸಿದೆ. ಈ ಪ್ರದೇಶದಲ್ಲಿ ಮಸೀದಿ ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಲ್ಲಿನ ಹಿಂದೂ ಜಾಗರಣ ವೇದಿಕೆ ಘಟಕವು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಅಂದು ಜಿಲ್ಲಾಧಿಕಾರಿ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ಬಳಿಕ ಇದನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಲಾಗಿತ್ತು. ಈ ಸಂದರ್ಭದಲ್ಲಿ ಹೈಕೋರ್ಟು ನೀಡಿದ ತಡೆಯಾಜ್ಞೆಗೆ ಬಂಟ್ವಾಳ ಪುರಸಭೆ ಕೆಲವು ಷರತ್ತು ವಿಧಿಸಿ ತಡೆಯಾಜ್ಞೆ ತೆರವುಗೊಳಿಸಿದೆ.
8btl-Maseediಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಚರ್ಚೆಗೆ ಕಾರಣವಾಗಿ ಬಳಿಕ ಮತ್ತೆ ಹಿಂದೂ ಜಾಗರಣ ವೇದಿಕೆಯು ಇದನ್ನು ಹೈಕೋರ್ಟಿನ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಧಾರ್ಮಿಕ ಕಟ್ಟಡಗಳ ತೆರವು ಆದೇಶದ ಪ್ರಕಾರ ಕಾಮಗಾರಿ ಮುಂದುವರಿಸದಂತೆ ಸೂಚಿಸಿದೆ ಎಂದು ಸಂಘಟನೆ ಸಂಚಾಲಕ ಚಂದ್ರ ಕಲಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *