ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಬಸ್ಸು ತಂಗುದಾಣ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಪಕ್ಕಕ್ಕೆ ಉರುಳಿಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ಬಿ.ಸಿ.ರೋಡು ಸಮೀಪದ ತಲಪಾಡಿ ಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕುಪ್ಪಿಲ ನಿವಾಸಿ ಸತೀಶ್ ಶೆಟ್ಟಿ (38) ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಲ್ಲಂಗಡಿ ಹಣ್ಣು ಸಾಗಾಟದ ಲಾರಿ ತಲಪಾಡಿ ಸಮೀಪ್ ಚಾಲಕ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ತೀರಾ ಎಡಭಾಗಕ್ಕೆ ಚಲಿಸಿದ್ದು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬಸ್ ತಂಗುದಾಣದಲ್ಲಿ ನಿಂತಿದ್ದ ಸತೀಶ್ ಎಂಬವರಿಗೆ ತೀವ್ರ ತರಹದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
7

3

5

6

2
ಘಟನೆಯ ತೀವ್ರತೆಗೆ ಬಸ್ತಂಗುದಾಣ ಸಂಪೂರ್ಣ ಜಖಂ ಗೊಂಡಿದ್ದು, ಬಳಿಕ ಬಸ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬವೂ ಮುರಿದು ಬಿದ್ದಿದೆ. ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದು, ಗಾಯಾಳು ಸತೀಶ್ ರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ, ವೃತ್ತ ನಿರೀಕ್ಷಕ ಬೆಳ್ಳಿಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದಾರೆ

By Suddi9

Leave a Reply

Your email address will not be published. Required fields are marked *