ಮೂಡುಬಿದರೆ: ಶಿಕ್ಷಣವನ್ನು ನಮ್ಮ ಬದುಕಿನಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸಕಾರತ್ಮಕ ಜೀವನಕ್ರಮದಿಂದ ಯಶಸ್ಸು ಪ್ರಾಪ್ತಿಯಾಗುತ್ತದೆ. ಹುಟ್ಟೂರಿನ ಬಗ್ಗೆ ಅಭಿಮಾನ, ಗುರು ಹಿರಿಯರಿಗೆ ಗೌರವ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬಲಗೊಳ್ಳುವುದರೊಂದಿಗೆ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳಬೇಕೆಂದು ಕಾರ್ಕಳ ಜ್ಞಾನ ಸುಧಾ ಪಿಯು ಕಾಲೇಜಿನ ಸ್ಥಾಪಕ ಡಾ.ಸುಧಾಕರ ಶೆಟ್ಟಿ ಹೇಳಿದರು.

mbd_march16_4
ತೋಡಾರಿನಲ್ಲಿರುವ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ `ಸಂಭ್ರಮ’-ವಿದ್ಯಾರ್ಥಿಗಳ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಯೆನೆಪೋಯ ವಿ.ವಿಯ ನಿರ್ದೇಶಕ ಡಾ.ಜಿ ಶ್ರೀಕುಮಾರ್ ಮೆನನ್ ಮುಖ್ಯ ಅತಿಥಿಯಾಗಿದ್ದರು.
ಕಾಲೇಜಿನ ಆಡಳಿತಾಧಿಕಾರಿ ಡಾ. ವಿವೇಕಾನಂದ ವಿ.ವರ್ಣಾಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುಣಮಟ್ಟದ ಶಿಕ್ಷಣದೊಂದಿಗೆ ಯೆನೆಪೋಯ ಸಂಸ್ಥೆಯು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳ ತಮ್ಮ ಸನ್ನಡತೆ, ವೈಯಕ್ತಿಕ ಸಾಮಥ್ರ್ಯವನ್ನು ಸಾಧನೆಯಾಗಿ ಪರಿವರ್ತಿಸಬೇಕೆಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಸಂದೀಪ್ ಜೆ.ನಾಯಕ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಬಸವರಾಜಪ್ಪ ವೈ.ಎಚ್, ಕಾರ್ಯಕ್ರಮ ಸಂಯೋಜಕರಾದ ಜೆ.ಡಬ್ಲ್ಯು ಪಿಂಟೋ, ವಾಣಿ ಅಡಿಗ ವೇದಿಕೆಯಲ್ಲಿದ್ದರು.

By Suddi9

Leave a Reply

Your email address will not be published. Required fields are marked *