ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಪ್ರಮುಖರಾದ ಸುದರ್ಶನ್ ಜೈನ್, ಪದ್ಮಾವತಿ ಪೂಜಾರಿ, ಚಂದ್ರಪ್ರಕಾಶ ಶೆಟ್ಟಿ, ಕೆ.ಮಾಯಿಲಪ್ಪ ಸಾಲ್ಯಾನ್, ದೇವಪ್ಪ ಕುಲಾಲ್ , ಕೇಶವ ಪೂಜಾರಿ ಮತ್ತಿತರರು ಇದ್ದರು.
