ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಕೈಕಂಬ ಸಮೀಪದ ಮಿತ್ತಬೈಲು ಮಸೀದಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಉಜಿರೆ ಕಡೆಗೆ ಹೋಗುತ್ತಿದ್ದ
ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಿದ್ಧಕಟ್ಟೆ ರಿಕ್ಷಾ ಪ್ರಯಾಣಿಕರು ಗಾಯಗೊಂಡರು. ಇದೇ ವೇಳೆ ಸ್ಥಳೀಯರು ಧಾವಿಸಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ್ದು, ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
