ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾ.14 ರಂದು ಅಪಘಾತ ನಡೆದಿದ್ದು, ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
20160317_200030ಮೃತದೇಹದ ಶವಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮಂಗಳೂರಿನ ಶವಾಗಾರದಲ್ಲಿರಿಸಲಾಗಿದೆ. ಮೃತ ಮಹಿಳೆಯ ವಾರೀಸುದಾರರಿದ್ದಲ್ಲಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ(08255-281111)ಯನ್ನು ಸಂಪರ್ಕಿಸುವಂತೆ ಸಂಚಾರಿ ಉಪನಿರೀಕ್ಷಕ ಚಂದ್ರಶೇಖರಯ್ಯ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *