ಬಂಟ್ವಾಳ: ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಮುಂದಾಗಿರುವ ಪುರಸಭೆ ಶನಿವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿತು.
ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ದಿನನಿತ್ಯ ಟ್ರಾಫಿಕ್ ಕಿರಿಕಿರಿಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಇದನ್ನು ಮನಗಂಡ ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಅವರು ಪುರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ, ಸರ್ವೀಸ್ ರಸ್ತೆಯನ್ನು ಅಗಲೀಕರಣ ಮಾಡುವುದು ಮತ್ತು ತಾತ್ಕಾಲಿಕ ಬಸ್ ಸೆಲ್ಟರ್ ನಿರ್ಮಾಣ ಮಾಡುವುದರ ಬಗ್ಗೆ ಯೋಜನೆ ರೂಪಿಸಲಾಯಿತು.

1

2

3ಇಂದು ಭೇಟಿ ನೀಡಿದ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ, ಮುಖ್ಯಧಿಕಾರಿ ಸ್ಥಳ ಪರಿಶೀಲಿಸಿ, ರೋಟರಿ ಮತ್ತು ಸ್ಥಳೀಯ ಉದ್ಯಮಿಗಳು ನೆರವಿನೊಂದಿಗೆ ಬೇಸಿಗೆ ಮತ್ತು ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ವೀಸ್ ರಸ್ತೆಯಲ್ಲಿ ಹಳೆ ತಾಲೂಕು ಪಂಚಾಯತ್ ಕಟ್ಟಡಕ್ಕೆ ತಾಗಿಕೊಂಡು ಬಸ್ ಸೆಲ್ಟರ್ ನಿರ್ಮಾಣ, ಸುಮಾರು 20 ಪೈಪ್‍ಗಳನ್ನು ಅಳವಡಿಸಿಕೊಂಡು ಚರಂಡಿ ನಿರ್ಮಾಣ, ರಸ್ತೆ ಬದಿಯ ಅನಧಿಕೃತ ಅಂಗಡಿಗಳ ತೆರವು ಹಾಗೂ ರಸ್ತೆ ಅಗಲೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *