ಬಂಟ್ವಾಳ:ತಾಲ್ಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಸರ್ಕಾರಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ಹಿಂಬದಿ ಸವಾರ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಮಡಂತ್ಯಾರು ಸಮೀಪದ ಪಾರೆಂಕಿ ನಿವಾಸಿ ಸರೋಜಿನಿ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ ತನ್ನ ಪುತ್ರಿ ಮತ್ತು ಮಗುವನ್ನು ನೋಡಿದ ಬಳಿಕ ಇವರು ತನ್ನ ಪುತ್ರ ಲೋಕೇಶ ಎಂಬವರೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
