ಬಂಟ್ವಾಳ : ಅಂಗನವಾಡಿಯಿಂದ ಮನೆಗೆ ತೆರಳುತ್ತಿದ್ದ ಮಗುವಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಗು ಗಾಯಗೊಂಡ ಘಟನೆ ಗೊಳ್ತಮಜಲು ಸಮೀಪದ ಎಮರ್ೆಮಜಲು ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಇಲ್ಲಿನ ನಿವಾಸಿ ಮುಸ್ತಫ ಎಂಬವರ ಪುತ್ರ ರಿಹಾನ್(4) ಬೈಕ್ ಢಿಕ್ಕಿಹೊಡೆದು ಗಾಯಾಗೊಂಡ ಮಗು. ರಿಹಾನ್ ತನ್ನ ಅಜ್ಜಿಯೊಂದಿಗೆ ಅಂಗನವಾಡಿಯಿಂದ ಮನೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಬೈಕ್ ಸವಾರ ಬೈಕ್ ನಿಲ್ಲಿಸದೆ ಪರಾರಿಯಾಗಿದ್ದಾನೆ. ಮಗುವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
