ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ ಜ್ವರ ಹಾಗೂ ಮಲೇರಿಯಾ ಪ್ರಕರಣ ಪತ್ತೆಯಾಗಿದ್ದು ಗ್ರಾಮದ ನಾಗರಿಕರು ಭಯಭೀತಗೊಂಡಿದ್ದಾರೆ.

1 (4)

2 (3)
ಗ್ರಾಮದ ಒಂದೇ ಕಾಲನಿಯಲ್ಲಿ ಸುಮಾರು 16 ಶಂಕಿತ ಡೆಂಗ್ ಪ್ರಕರಣ ಹಾಗೂ ಒಂದು ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ರೋಗ ಬಾಧಿತರಲ್ಲಿ ಕೆಲವರು ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಲಲಿತ, ರತ್ನ, ಧನು ಕೀರ್ತಿ , ಚೇತನ್, ಪ್ರಿಯ, ವಿದ್ಯಾರ್ಥಿಗಳಾದ ದೀಪಿಕ, ರಿತೇಶ್ ಎಂಬವರು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಲನಿಯ ಜನರು ರೋಗಪೀಡಿತರಾಗುತ್ತಿರುವ ಬಗ್ಗೆ ಸ್ಥಳೀಯ ಮುಖಂಡರು ಗ್ರಾಪಂ ಹಾಗೂ ತಾಪಂ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅವರು ಆ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರು ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಆರೋಗ್ಯಾಧಿಕಾರಿ ರೋಗ ಪೀಡಿತರು ಚಿಕಿತ್ಸೆ ಪಡೆಯುತ್ತಿರುವ ತುಂಬೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಗ್ರಾಮಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಪರಿಸರವನ್ನು ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ವೇಳೆ ಗ್ರಾಮದ ತೋಟಗಳ ತೋಡುಗಳಲ್ಲಿ ಹಾಗೂ ಅಡಿಕೆ ಹಾಲೆಗಳಲ್ಲಿ ನೀರು ನಿಂತಿರುವುದು ಪತ್ತೆಯಾಗಿದೆ. ಈ ನೀರಿನಲ್ಲಿ ಸೊಳ್ಳೆಗಳು ಉತ್ಪತಿಯಾಗಿ ರೋಗ ಹರಡಿರುವ ಬಗ್ಗೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಡೆಂಗ್ ಪ್ರಕರಣ ಪತ್ತೆಯಾದ ಪ್ರದೇಶದಲ್ಲಿ ಫೋಗಿಂಗ್ ಸಿಂಪಡಿಸುವಂತೆ ಹಾಗೂ ಮುಂಜಾಗೃತ ಕ್ರಮ ತೆಗೆದು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವಂತೆ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಜಿಲ್ಲಾ ಆರೋಗ್ಯ ಅಧಿಕಾರಿ ಇದೇ ವೇಳೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಪಂ ಹಾಗೂ ತಾಪಂ ಅಧಿಕಾರಿಗಳು ಶುಕ್ರವಾರ ಮತ್ತು ಶನಿವಾರ ಗ್ರಾಮದ ಕೆಲವೆಡೆ ಫೋಗಿಂಗ್ ಸಿಂಪಡನೆ ಕಾರ್ಯಾಚರಣೆ ನಡೆಸಿದರು.

By suddi9

Leave a Reply

Your email address will not be published. Required fields are marked *