ಬಂಟ್ವಾಳ: ರಾಜ್ಯದೆಲ್ಲೆಡೆ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬಂಟ್ವಾಳ ತಾಲ್ಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ವಿವಿಧ ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರವಾಸಿ ತಾಣಗಳನ್ನು ಗುಉತಿಸಿ ಅಭಿವೃದ್ಧಿಪಡಸಲಾಗುತ್ತದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.18 btl- Ajilamogaru

ತಾಲ್ಲೂಕಿನ ಪ್ರಸಿದ್ಧ ಅಜಿಲಮೊಗರು ಜುಮ್ಮಾ ಮಸೀದಿಯಲ್ಲಿ ರೂ 50ಲಕ್ಷ ವೆಚ್ಚದ ‘ಯಾತ್ರಿ ನಿವಾಸ’ ನಿರ್ಮಾಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಅಜಿಲಮೊಗರು ಜುಮ್ಮಾ ಮಸೀದಿ ಮತ್ತು ಕಡೇಶ್ವಾಲ್ಯ ಲಕ್ಷ್ಮೀನರಸಿಂಹ ದೇವಾಲಯ ಸಂಪರ್ಕಿಸುವ ಸೇತುವೆ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭಗೊಳ್ಳಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಚ್. ಖಾದರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ. ಪದ್ಮಶೇಖರ ಜೈನ್, ಶಾಹುಲ್ ಹಮೀದ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಬಿ.ಎಂ. ಅಬ್ಬಾಸ್ ಅಲಿ, ಬೇಬಿ ಕೃಷ್ಣಪ್ಪ, ಮಾಜಿ ಸದಸ್ಯ ಸಂಪತ್ ಕುಮಾರ್ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲಿಯಾನ್, ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಜಯಾನಂದ, ಧರ್ಮಗುರು ಉಬೈದ್ ಸಖಾಫಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶ್ರೀಧರ, ಮಸೀದಿ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್, ಪ್ರಮುಖರಾದ ಪಿ. ಜಿನರಾಜ ಆರಿಗ, ಮಹಮ್ಮದ್ ಕುಂಞ, ವಿಜಯ ವಿಕ್ರಂ, ಶಿವಪ್ಪ ಪೂಜಾರಿ, ಡೆನ್ನಿಸ್ ಮೋರಸ್, ಅಬ್ದುಲ್ಲ, ಕಬೀರ್ ಗಡಿಯಾರ ಮತ್ತಿತರರು ಇದ್ದರು.
ಆದಂ ಕುಂಞಿ ಸ್ವಾಗತಿಸಿ, ವಂದಿಸಿದರು. ಜಬ್ಬಾರ್ ಪೊನ್ನೋಡಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *