ಬಂಟ್ವಾಳ : ತಾಲೂಕು ಕಾವಳಪಡೂರು, ವಗ್ಗ ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ಶಾಲಾ ಪ್ರಾರಂಭೋತ್ಸವ ಜರಗಿತು.

ಕಾಲೇಜು ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾಯರ್ಾಧ್ಯಕ್ಷ ಪಿ.ಜಿನರಾಜ ಆರಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನ ಸವರ್ಾಂಗೀಣ ಪ್ರಗತಿಗೆ ಪಾಲಕ-ಪೋಷಕ ವೃಂದದವರು ಸಹಕರಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸರಕಾರದಿಂದ ಕೊಡಮಾಡಿದ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿದ್ಯಾಥರ್ಿಗಳಿಗೆ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಶೇಕ್ ಆದಂ ಸಾಹೇಬ್ ಅವರು ವಿದ್ಯಾಥರ್ಿಗಳ ಫಲಿತಾಂಶದ ಸಾಧನೆಯನ್ನು ಅಭಿನಂದಿಸಿದರು. ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.
ಶಿಕ್ಷಕ ಫ್ರೆಡ್ರಿಕ್ ಡಿಸೋಜಾ ಅವರು ಸ್ವಾಗತಿಸಿದರು. ಶಿಕ್ಷಕ ಶ್ರೀನಿವಾಸ ನಾಯ್ಕ ವಂದಿಸಿದರು. ಶಿಕ್ಷಕಿ ಲೈಲಾ ಪವರ್ಿನ್ ಕಾರ್ಯಕ್ರಮ ನಿರೂಪಿಸಿದರು.
