ಬಂಟ್ವಾಳ : ಪುರಸಭೆ ವ್ಯಾಪ್ತಿಯ ವಾರ್ಡ್ 16ರ ತಲಪಾಡಿ ಮಫತ್ ಲಾಲ್ ಲೇಔಟ್ ನಲ್ಲಿ ರೂ.40ಲಕ್ಷ ವೆಚ್ಚದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಳ್ಳಲಿರುವ ಉದ್ಯಾನವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ದ.ಕ.ಜಿ.ಪಂ.ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಿವೇದಿತ್ ಆಳ್ವ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಪುರಸಭಾಧಿಕಾರಿ ಸುಧಾಕರ್ ಭಟ್, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಸಾಹುಲ್ ಹಮೀದ್, ತಾ.ಪಂ.ಸದಸ್ಯ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಮಹಮ್ಮದ್ ಶರೀಫ್, ವಸಂತಿ ಚಂದಪ್ಪ, ಜಗ ದೀಶ್ ಕುಂದರ್, ಗಂಗಾಧರ ಮಂಡಾಡಿ, ಪ್ರಭಾ ಸಾಲಿಯಾನ್, ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರದೀಪ್ ಡಿಸೋಜ, ನಿರ್ಮಿತಿ ಕೇಂದ್ರದ ರಾಜೇಂದ್ರ ಕಲ್ಬಾವಿ, ಪ್ರಮುಖರಾದ ಸತೀಶ್ ಭಂಡಾರಿ ಕುಳತ್ತಬೆಟ್ಟು, ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

KAR_4028

KAR_4039

By suddi9

Leave a Reply

Your email address will not be published. Required fields are marked *