ವಿಟ್ಲ :ಜೀರ್ಣೋದ್ಧಾರಗೊಳ್ಳುತ್ತಿರುವ ವಿಟ್ಲ ಕಸ್ಬಾ ಗ್ರಾಮದ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ನೂತನ ಗರ್ಭಗುಡಿ ಹಾಗೂ ನಮಸ್ಕಾರ ಮಂಟಪದ ಶಿಲಾನ್ಯಾಸವನ್ನು ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ವಿಟ್ಲ ಅರಮನೆ ಅರಸರಾದ ಜನಾರ್ಧನ ವರ್ಮ ಅರಸರು, ವಾಸ್ತು ಶಿಲ್ಪಿಗಳು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಹಾಗೂ ವಿಶ್ವಸ್ಥ ಮಂಡಳಿ ಅಧಕ್ಷರು ಮತ್ತು ಸದಸ್ಯರು, ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಅಧ್ಯಕ್ಷ, ಕಾರ್ಯಾಧ್ಯಕ್ಷ ಹಾಗೂ ಸದಸ್ಯರು ಮತ್ತು ಊರವರು ಭಾಗವಹಿಸಿದ್ದರು

