ಯುವವಾಹಿನಿ (ರಿ)ಬಂಟ್ವಾಳ ತಾಲೂಕು ಘಟಕದ 2016-17ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15-05-2016ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಜರಗಲಿರುವುದು.
ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಮಾಜ ಸಂಘದ ಅದ್ಯಕ್ಷರಾದ ಶ್ರೀ ಕೆ. ಸೇಸಪ್ಪ ಕೋಟ್ಯಾನ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಉತ್ತರ ಪೆÇಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಶ್ರೀ ಶಾಂತರಾಮ ಕುಂದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಯುವವಾಹಿನಿ (ರಿ)ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ರಾಜೇಶ್ ಸುವರ್ಣರವರು ತಿಳಿಸಿದ್ದಾರೆ.
