ವಿಟ್ಲ: ಕೆಲಸಕ್ಕೆಂದು ಮನೆಯಿಂದ ಹೋದ ವ್ಯಕ್ತಿ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಬೋಳಂತೂರು ಸಮೀಪದ ಕಿ ಪಿ ಬೈಲು ನಿವಾಸಿ ಸುಲೇಮಾನ್ ಅವರ ಪುತ್ರ ಅಶ್ರಫ್(20) ನಾಪತ್ತೆಯಾದ ವ್ಯಕ್ತಿಯಾಗಿದ್ದಾನೆ. ಎ.10ರಂದು ಕೂಲಿಕೆಲಸಕ್ಕೆಂದು ಮನೆಯಿಂದ ಹೋದ ಈತ ಮತ್ತೆ ಮನೆಗೆ ಹಿಂದಿರುಗಿಲ್ಲ. ಕೆಲಸ ಮಾಡುವಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಿ ಪತ್ತೆಯಾಗದ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ದೂರು ನೀಡಲಾಗಿದೆ.

