ಬಂಟ್ವಾಳ : ದ.ಕ. ಜಿಲ್ಲಾ ಅಹಿಂದ ಕಾರ್ಯಾಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ದ.ಕ. ಜಿಲ್ಲಾ ಕಾಂಗ್ರೆಸ್ (ಐ) ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎನ್. ಪದ್ಮನಾಭ ನರಿಂಗಾನರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಅಹಿಂದ ಮಹಾಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಗಿದೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಎನ್. ಪದ್ಮನಾಭ ರವರ ಈ ಆಯ್ಕೆಯಿಂದಾಗಿ ದ.ಕ. ಜಿಲ್ಲೆಯಲ್ಲಿ ಅಹಿಂದ ಇನ್ನಷ್ಟು ಬಲಗೊಳ್ಳಲಿದೆ ಎಂದು ಡಿ.ಕೆ. ಡಿಸ್ಟ್ರಿಕ್ಟ್ ಅಂಬೇಡ್ಕರ್ ಫೋರಂ ಫಾರ್ ಸೋಶಿಯಲ್ ಜಸ್ಟೀಸ್‍ನ ಅಧ್ಯಕ್ಷ ಭಾನುಚಂದ್ರ ಕೃಷ್ಣಾಪುರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

