ಬಂಟ್ವಾಳ: ಕಳೆದ ಮೇ17ರಂದು ಬೀಸಿದ ಬಿರುಗಾಳಿಗೆ ಮನೆ, ತೋಟಗಳ್ನು ಕಳಕೊಂಡ ಸಂತ್ರಸ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ತನ್ನ ಕಚೇರಿಯಲ್ಲಿ ಪರಿಹಾರ ಧನದ ಚೆಕ್ ವಿತರಿಸಿದರು.

130 ಮಂದಿ ಸಂತ್ರಸ್ತರಿಗೆ ಒಟ್ಟು 5ಲಕ್ಷ ಮೊತ್ತದ ಪರಿಹಾರ ಧನದ ಚೆಕ್ ವಿತರಿಸಲಾಗಿದ್ದು ಈವರೆಗೆ ಒಟ್ಟು 20 ಲಕ್ಷ ಮೊತ್ತದ ಚೆಕ್ ವಿತರಿಸಿದಂತಾಗಿದೆ. ಈ ಸಂದರ್ಭ ಜಿ.ಪಂ.ಸದಸ್ಯರಾದ ಪದ್ಮಶೇಖರ ಜೈನ್, ಮಮತಾಗಟ್ಟಿ, ಮಂಜುಳಾ ಮಾಧವ ಮಾವೆ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಜಿಲ್ಲಾ ಅರಣ್ಯ ಸಮಿತಿ ಸದಸ್ಯ ಪರಮೇಶ್ವರ ಮೂಲ್ಯ, ಕೆಡಿಪಿ ಸದಸ್ಯ ಉಮೇಶ್ ಬೋಳಂತೂರು, ತಾ.ಪಂ.ಮಾಜಿ ಅಧ್ಯಕ್ಷ ಸತೀಶ್ಚಂದ್ರ, ತಹಶೀಲ್ದಾರ್ ಪುರಂದರ ಹೆಗ್ಡೆ ಹಾಗೂ ಕಂದಾಯಾಧಿಕಾರಿಗಳು ಹಾಜರಿದ್ದರು.
