ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬಳಿ ವ್ಯಕ್ತಿಯೊಬ್ಬರಿಗೆ ಐವರ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ. ತಾಲ್ಲೂಕಿನ ಮೇರಮಜಲು ನಿವಾಸಿ ಸಂಜೀವ ಪ್ರಭು ಎಂಬವರ ಪುತ್ರ ಯೋಗೀಶ ಪ್ರಭು ಎಂಬವರನ್ನು ಸ್ಥಳೀಯ ನಿವಾಸಿಗಳಾದ ಪ್ರಸಾದ್, ರವಿಕಿರಣ್, ದೀಕ್ಷಿತ್, ರಂಜಿತ್ ಮತ್ತು ವಿಶು ಕುಮಾರ್ ಎಂಬವರು ತಡೆದು ನಿಲ್ಲಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ
