ಮಂಗಳೂರು: ಯೆನೆಪೋಯ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್.ಘಟಕ ಹಾಗೂ ದಂತವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ವಿಶ್ವ ತಂಬಾಕು ದಿನವನ್ನು ಆಚರಿಸಲಾಯಿತು. ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ರಘುವೀರ್ ತಂಬಾಕು ವಿರೋಧ ರ್ಯಾಲಿಗೆ ಚಾಲನೆ ನೀಡಿದರು.
ಹಾಗೂ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಕುಲಸಚಿವ ಡಾ.ಶ್ರೀಕುಮಾರ್ ಮೆನನ್, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಪತಿ ರಾವ್, ಡಾ. ಅಖ್ತರ್ ಹುಸೈನ್, ಡಾ.ಗಣೇಶ್ ಶೆಣೈ, ಎನ್.ಎಸ್.ಎಸ್ ಅಧಿಕಾರಿ ಡಾ.ಇಮ್ರಾನ್ ರ್ಯಾಲಿಯಲ್ಲಿ ಭಾಗವಹಿಸಿದರು. ವಿಶ್ವ ವಿದ್ಯಾನಿಲಯದ ಎನ್.ಎಸ್.ಎಸ್ ವಿದ್ಯಾರ್ಥಿಗಳು ರ್ಯಾಲಿ ಮತ್ತು ಬೀದಿ ನಾಟಕದೊಂದಿಗೆ ಸಾರ್ವಜನಿಕರಿಗೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

