ಮಂಗಳೂರು, : ಪಡೀಲ್ ಹೋಮ್ ಸ್ಟೇ ದಾಳಿಯ ಪ್ರಮುಖ ಆರೋಪಿ ಸುಭಾಷ್ ಪಡೀಲ್ ಹತ್ಯೆ ಯತ್ನ ನಡೆದಿದೆ. ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 2012ರ ಹೋಮ್ ಸ್ಟೇ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್‌ಗೆ ವಿಚಾರಣೆಗೆ ಸುಭಾಷ್ ಪಡೀಲ್ ಬಂದಿದ್ದಾಗ ಈ ಘಟನೆ ನಡೆದಿದೆ. ರಾಜ ಅಲಿಯಸ್ ಜಪಾನ್ ಮಂಗ ಸುಭಾಷ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು, ಅವರನ್ನು ಕೊಲ್ಲಲು ಯತ್ನಿಸಿದ್ದಾನೆ.ಸುಭಾಷ್‌ ಹಿಂದೂ ಜಾಗರಣ ವೇದಿಕೆಯ ನಾಯಕರಾಗಿದ್ದಾರೆ. ರಾಜಾ ಅವರು ಕೊಲೆ ಪ್ರಕರಣ ಸೇರಿದಂತೆ ಇತರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗಿದೆ.

 

mangalurucourt-04-1465033712

ಈ ಸಂದರ್ಭದಲ್ಲಿ ಕೋರ್ಟ್‌ ಆವರಣದಲ್ಲಿ ಜಪಾನ್ ಮಂಗ ಹಾಗೂ ಸುಭಾಷ್ ಸಹಚರರ ನಡುವೆ ಹೊಡೆದಾಟ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಜಪಾನ್ ಮಂಗನನ್ನು ಬಂಧಿಸಿದ್ದಾರೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.   ರಾಜ ಅಲಿಯಾಸ್‌ ಜಪಾನ್‌ ಮಂಗ ಎಂಬಾತನು ಸಣ್ಣಪುಟ್ಟ ಅಪರಾಧಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ 2012ರಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ, ಉದ್ಯಮಿಯೊಬ್ಬರ ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

By suddi9

Leave a Reply

Your email address will not be published. Required fields are marked *