ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಅಧ್ಯಕ್ಷತೆಯಲ್ಲಿ ಶನಿವಾರ ಬೆಳಗ್ಗೆ ಬಿ.ಸಿ.ರೋಡಿನ ಎಸ್.ಜೆ.ಎಸ್.ಆರ್.ವೈ. ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾ ಮೀರಾಂದ ಕಾರ್ಯ ಕಲಾಪ ನಡೆಸಿದರು.
