ಬಂಟ್ವಾಳ ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಶ್ರಮದಾನ ಮೂಲಕ ಬಾವಿ ಹೂಳೆತ್ತಿ ಪರಿಸರ ಶುಚಿಗೊಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಮಂಡಳಿ ಅಧ್ಯಕ್ಷ ದಿನೇಶ ಭಟ್, ಸಂಚಾಲಕ ಎಂ.ಸದಾನಂದ ಗೌಡ, ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಮತ್ತಿತರರು ಇದ್ದರು.

