ವಿಟ್ಲ: ದ ಕ ಜಿ ಪಂ ಹಿ ಪ್ರಾ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ 2016-17ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಪಟ್ಯ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. 
ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ರೇಖಾ, ಸದಸ್ಯರುಗಳಾದ ಪ್ರಭಾಕರ ಶೆಟ್ಟಿ ದಂಬೆಕಾನ, ಈಶ್ವರ ಭಟ್, ನರಸಿಂಹ ಬಲ್ಲಾಳ್, ಆನಂದ ಆಚಾರ್ಯ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಎನ್ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಕೆ ವಂದಿಸಿದರು. ಶಿಕ್ಷಕಿ ಪುಷ್ಪಾವತಿ ನಿರೂಪಿಸಿದರು. ಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು
