ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 2016-17 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘಗಲ ಉದ್ಘಟನೆಯನ್ನು ಬೆಟ್ಟಂಪ್ಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ರಾವ್ ನೆರವೇರಿಸಿದರು. ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ ಶಿ ವಿಶ್ವನಾಥ, ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಶಿಕ್ಷಕರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಮಕ್ಕಳು ಉಪಸ್ಥಿತರಿದ್ದರು .

