ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್(ಎಐಟಿಯುಸಿ) ಇದರ 39 ನೇ ವಾರ್ಷಿಕ ಮಹಾಸಭೆಯು ಇದೇ 21 ರಂದು ಬೆಳಿಗ್ಗೆ ಪಾಣೆಮಂಗಳೂರು ಸುಮಂಗಲಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಪ್ರಸಕ್ತ ಕೇಂದ್ರ ಸರ್ಕಾರದ ಕೈಗಾರಿಕಾ ವಿರೋಧಿ ನೀತಿಗಳಿಂದಾಗಿ ಬೀಡಿ ಕೈಗಾರಿಕೆ ವಿಷಮ ಸ್ಥಿತಿಯಲ್ಲಿದ್ದು, ಬೀಡಿ ಕಾರ್ಮಿಕರ ಬದುಕು ಡೋಲಾಯಮಾನವಾಗಿದೆ. ಈ ಮಹಾಸಭೆಯಲ್ಲಿ ಕೈಗೊಳ್ಳಲಿರುವ ನಿರ್ಣಯಗಳು ಬೀಡಿ ಕಾರ್ಮಿಕರ ಕೆಲಸದ ಭದ್ರತೆ ಮತ್ತು ಕಾನೂನು ಸೌಲಭ್ಯಗಳ ಉಳಿವಿಗಾಗಿ ಮಹತ್ವಪೂರ್ಣವಾಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *