ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ಮೆಟ್ರೋ ರೋಟರಿ ಕ್ಲಬ್ ವತಿಯಿಂದ ಉಚಿತ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ ಶುಕ್ರವಾರ ವಿತರಿಸಲಾಯಿತು.

ರೋಟರಿ ಕ್ಲಬ್ಬಿನ ಅಧ್ಯಕ್ಷ ಶೈಲೇಂದ್ರ ಪೈ, ನಿರ್ದೇಶಕ ಡಾ.ರಂಜನ್, ಸುರೇಶ್ ಬಾಬು, ರಂಗನಾಥ ಭಟ್, ಶ್ಯಾಂಪ್ರಕಾಶ್, ರಾಜೇಶ್, ಚಂದ್ರಶೇಖರ ಭಟ್, ಮೈಥಿಲಿ, ಸುರೇಖಾ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ಗ್ರಾಮ ಪಂಚಾಯಿತಿ ಸದಸ್ಯ ಕಿಶೋರ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ, ಮುಖ್ಯಶಿಕ್ಷಕಿ ಚಂದ್ರಾವತಿ ಮತ್ತಿತರರು ಇದ್ದರು.
