ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಮದ್ದಡ್ಕ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟಿರುವುದಗಿ ತಿಳಿದುಬಂದಿದೆ.
ಇಂದು ಮಧ್ಯಾಹ್ನದ ವೇಳೆಗೆ ಬುಲೆಟ್ ಟ್ಯಾಂಕರ್ ಹಾಗೂ ಕಾರ್ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯಿಂದ ಒಬ್ಬರು ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಹಲವರು ಗಂಭಿರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

IMG-20160620-WA0053

IMG-20160620-WA0054

IMG-20160620-WA0055
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.. ಘಟನೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬುಲೆಟ್ ಟ್ಯಾಂಕರ್‍ಗಳ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಇಲ್ಲಿ ಅಪಘಾತಗಳು ಸಾಮಾನ್ಯವಾಗಿದೆ. ಅಲ್ಲದೆ ಬುಲೆಟ್ ಟ್ಯಾಂಕರ್‍ಗಳಿಂದ ಆಯಿಲ್ ಸೋರಿಕೆಯಾಗಿ ಸಣ್ಣ ವಾಹನಗಳ ಚಕ್ರಗಳು ಜಾರಿ ಹಲವಾರು ಅಪಘಾತ ಸಂಭವಿಸುತ್ತಲೇ ಇದೆ.

By suddi9

Leave a Reply

Your email address will not be published. Required fields are marked *