ಬಂಟ್ವಾಳ: ಇಲ್ಲಿನ ಬಂಟ್ವಾಳ ಲಯನ್ಸ್ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಅಗ್ರಬೈಲು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಉಮೇಶ್ ಆಚಾರ್, ಕೋಶಾಧಿಕಾರಿಯಾಗಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಅವರನ್ನು ಆಯ್ಕೆಮಾಡಲಾಗಿದೆ.

BTW_JUNE20_4
ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.26ರಂದು ಬೆಳಿಗ್ಗೆ 10.30ಕ್ಕೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್‍ನ ಮಲ್ಟಿಪಲ್ ಕೌನ್ಸಿಲ್‍ನ ಚೇಯರ್‍ಮನ್ ಕೆ. ಮೋಹನ್ ಕಾಮತ್ ಪದಗ್ರಹಣ ನೆರವೇರಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕಿನ ಚೇಯರ್‍ಮನ್ ಅನಂತಕೃಷ್ಣ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *