ವಾಮಂಜೂರು: ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆ ಇಲ್ಲಿ ಜೂ. 21 ರಂದು ಮಂಗಳಜ್ಯೋತಿ ನಿರಂತರ ಯೋಗ ಕೇಂದ್ರ ದ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿಶ್ವ ಯೋಗ ದಿನಾಚರಣೆಯು ಜರಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪೊಳಲಿಯ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಭಾಗವಹಿಸಿ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸುವುದರ ಮೂಲಕ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಂತೋಷದ ಜೀವನ ನಡೆಸಲು ಸಾಧ್ಯ ಹಾಗೂ ಉತ್ತಮ ಮಾನವೀಯತೆ ಮತ್ತು ಆರೋಗ್ಯವನ್ನು ಗಳಿಸಿಕೊಳ್ಳುವುದು ಸಾಧ್ಯ ಎಂದರು. ಮಕ್ಕಳು ಸ್ವಾಮೀ ವಿವೇಕಾನಂದರ ಚಿಂತನೆಯಂತೆ ಒಳ್ಳೆಯ ಸಂಸ್ಕಾರವನ್ನು ಮೈಗೂಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ದೇಶ ಸೇವೆಗೆ ಬದ್ಧರಾಗಿರಬೇಕು ಎಂದು ನುಡಿದರು. DSC05970
DSC05872
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಡಳಿತಾಧಿಕಾರಿ ಮಾತನಾಡಿ ಭಾರತೀಯ ಯೋಗ ಪರಂಪರೆಯು ವಿಶ್ವದಲ್ಲೇ ಮಾನ್ಯತೆಯನ್ನು ಪಡೆಯುತ್ತಿದ್ದು ಕಳೆದ ಮೂರು ದಿನಗಳಿಂದ ವಿಶ್ವಸಂಸ್ಥೆಯ ಕಟ್ಟಡದಲ್ಲಿ ಯೋಗಾಸನ ಭಂಗಿಯನ್ನು ತೋರಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು. ಶ್ರೀ ರಾಮಕೃಷ್ಣ ತಪೋವನದ ಶ್ರೀ ಸುಜಿತ್ ಕುಲಕರ್ಣಿ , ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಅಶೋಕ್ ಕುಮಾರ್ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥೆ ಮಾರ್ಯಟ್ ಮಸ್ಕರೇನ್ಹಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯೋಗ ಹಾಗೂ ದೈಹಿಕ ಶಿಕ್ಷಕ ಶೇಖರ್ ಕಡ್ತಲ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಹಾಗೂ ಮಾಹಿತಿ ಕಾರ್ಯಕ್ರಮ ಜರಗಿತು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರಮೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *