ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿಜ್ಞಾನ ಸಂಘದ ವತಿಯಿಂದ ವಿಟ್ಲ ಸಮುದಾಯ ಆಸ್ಪತ್ರೆಯ ಸಹಯೋಗದೊಂದಿಗೆ `ಮಲೇರಿಯಾ ವಿರೋಧ ಮಾಸಾಚರಣೆ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಮುದಾಯ ಆಸ್ಪತ್ರೆಯ ವೈದಾಧಿಕಾರಿ ಡಾ| ಪ್ರಶಾಂತ್ ಮಲೇರಿಯಾ ರೋಗದ ನಿರ್ಮೂಲನದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು.

ಹಾಗೂ ಡೆಂಗೆ ರೋಗದ ಬಗ್ಗೆ ಮಾಹಿತಿ ನೀಡಿ ರೋಗದ ಹತೋಟಿ ಕ್ರಮಗಳನ್ನು ತಿಳಿಸಿದರು. ಶಿಕ್ಷಕಿ ವಾಣಿ, ಇತರ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕ ಮಹಬಲೇಶ್ವರ ಭಟ್ ಕಾರ್ಯಕ್ರಮ ಸಂಯೋಜಿಸಿದರು
