ಬಂಟ್ವಾಳ: ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಅದು ಎಷ್ಟು ಪಾಲಾನೆಯಾಗುತ್ತಿದೆ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಹೇಳಿದರು.ಅವರು ಮಂಗಳೂರಿನ ಪ್ರಜ್ಞಾ ಸಲಹಾ ಕೇಂದ್ರದ ವತಿಯಿಂದ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಹೆಣ್ಣು ಮಕ್ಕಳ ಸಂರಕ್ಷಣಾ ಹಕ್ಕುಗಳನ್ನು ಬಲಪಡಿಸುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರೀಕನ ಜವಬ್ದಾರಿ. ಹೆಣ್ಣು ಮಕ್ಕಳ ರಕ್ಷಣೆಯ ಕಾನೂನುಗಳನ್ನು ಅರಿತುಕೊಂಡು ಎಲ್ಲರಿಗೂ ಈ ಬಗ್ಗೆ ಅರಿವು ಮೂಡಿಸಬೇಕು. ಈ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳ್ಳಲು ಎಲ್ಲರೂ ಕೆಲಸ ಮಾಡಬೇಕು ಎಂದರು.
ಪ್ರಜ್ಞಾ ಸಲಹಾ ಕೇಂದ್ರದ ನಿರ್ದೇಶಕಿ ಹಿಲ್ಡಾ ರಾಯಪ್ಪನ್, ತಾ.ಪಂ.ಉಪಾದ್ಯಕ್ಷ ಅಬ್ಬಾಸ್ ಅಲಿ, ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ರಮೇಶ್ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಪುರಸಭೆ ಸಮುದಾಯ ಅಭಿವೃದ್ದಿ ಅಧಿಕಾರಿ ಮತ್ತಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಾರ್ಗರೇಟ್ ಆಳ್ವ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.


