ಬಂಟ್ವಾಳ : ತಾಲೂಕು ಕೊಯಿಲ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಮೇ 31ರಂದು ಶಾಲಾ ಪ್ರಾರಂಭೋತ್ಸವ ಜರಗಿತು.
1ನೇ ತರಗತಿಗೆ ಸೇರ್ಪಡೆಗೊಂಡ ವಿದ್ಯಾಥರ್ಿಗಳನ್ನು ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ದಾಮೋದರ ಬಂಗೇರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸರಕಾರದಿಂದ ಕೊಡಮಾಡಿದ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿದ್ಯಾಥರ್ಿಗಳಿಗೆ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್, ರಾಧಾಕೃಷ್ಣ ಆಚಾರ್, ಹರಿಶ್ಚಂದ್ರ ಶೆಟ್ಟಿ , ಸುಜಾತ, ಮಹೇಶ್ವರಿ, ಶಾಲಾ ಮುಖ್ಯ ಶಿಕ್ಷಕ ಕುಕ್ಕ ಕೆ. , ಶಾಲಾ ಶಿಕ್ಷಕ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು.
ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.
