ವಿಟ್ಲ:2015-16 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಲ್ಲಿ 591 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಪುತ್ತೂರು ಅಂಬಿಕಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ವರ್ಷ . ಪಿ ಇವರನ್ನು ವಿಟ್ಲ ಜೇಸಿಐ ವತಿಯಿಂದ ಸನ್ಮಾನಿಸಲಾಯಿತು. ಜೇಸಿಐ ಅಧ್ಯಕ್ಷ ಬಾಬು ಕೊಪ್ಪಳ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಪೂರ್ವಾಧ್ಯಕ್ಷ ಮೋಹನ ಮೈರ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. 
