ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಕಾಮಾಜೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ತನ್ನ ಐದರ ಹರೆಯದ ಹೆಣ್ಣು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಇಲ್ಲಿನ ನಿವಾಸಿ ಹೋಟೆಲ್ ಕಾರ್ಮಿಕ ಗಂಗಾಧರ ಪೂಜಾರಿ ಎಂಬವರು ಎಂದಿನಂತೆ ಗುರುವಾರ ಬೆಳಿಗ್ಗೆ ಕೆಲಸಕ್ಕೆ ಹೋದ ಬಳಿಕ ಪತ್ನಿ ಅನಿತಾ ತನ್ನ ಐದರ ಹರೆಯದ ಪುತ್ರಿ ಯಸ್ಮಿತಾ ಜೊತೆಗೆ ನಾಪತ್ತೆಯಾಗಿದ್ದಾರೆ ಎಂದು ಪೊಲೀಸಿಗೆ ದೂರು ಸಲ್ಲಿಸಿದ್ದಾರೆ.
