ಬಂಟ್ವಾಳ: ರಂಝಾನ್ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಕೆ.ಯು.ಬೆಳ್ಳಿಯಪ್ಪ ಮಾತನಾಡಿ ಶಾಂತಿ, ಸಾಮಾರಸ್ಯ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಸಮುದಾಯದ ಬಂಧುಗಳು ಪೊಲೀಸರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು. 
ಯಾವುದೇ ವ್ಯಕ್ತಿ, ಅಥವಾ ಸಮುದಾಯವನ್ನು ಪ್ರಚೋದಿಸುವಂತಹ ಕೆಲಸ ನಡೆಸದಂತೆ ಆಯಾ ಸಮುದಾಯದ ಮುಖಂಡರು ಯುವಕರಿಗೆ ಮನವರಿಕೆ ಮಾಡಿಕೊಡುವಂತೆ ಅವರು ತಿಳಿಸಿದರು. ಹಬ್ಬದ ಮುಗಿದ ಬಳಿಕ ದ್ವಿಚಕ್ರ ವಾಹನದಲ್ಲಿ ಅತೀ ವೇಗವಾಗಿ ಸಂಚರಿಸುವ ದೃಶ್ಯಗಳು ಪ್ರತೀ ವರ್ಷ ಕಂಡು ಬರುತ್ತಿದೆ. ಈ ಬಗ್ಗೆ ಹಿರಿಯರು ಕಡಿವಾಣ ಹಾಕಬೇಕು. ಅಪಘಾತ ನಡೆದ ಬಳಿಕ ಚಿಂತಿಸಿ ಪ್ರಯೋಜನವಿಲ್ಲ ಎಂದು ಸಲಹೆ ನೀಡಿದರು.ಗ್ರಾಮಾಂತರ ಠಾಣಾ ಎಸೈ ರಕ್ಷಿತ್, ಎ.ಕೆ. ನಗರ ಠಾಣಾ ಎಸೈ ನಂದಕುಮಾರ್ ಹಾಗೂ ಸಿಬ್ಬಂದಿಗಳು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
