ಬಂಟ್ವಾಳ : ಸುದ್ದಿ9 ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಯಶವಂತ ವ್ಯಾಯಾಮ ಶಾಲಾ ಸಭಾಂಗಣದಲ್ಲಿ  ಶನಿವಾರ  ದೀಪ ಬೆಳಗಿಸಿ ಉದ್ಘಾಟಿಸಿದ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.    ಕಾಂಗ್ರೆಸ್ಸಿನ ಜನಪರ ಕಾರ್ಯಕ್ರಮಗಳನ್ನು ಜನತೆಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಕಾರ್ಯಕರ್ತರು ಪಕ್ಷ ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕರೆ ನೀಡಿದರು.  ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬೇಕಾಗಿಲ್ಲ. ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಮೂಲಕ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಟಿಬದ್ದರಾಗ ಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.  ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಎಂ.ಎಸ್. ಮುಹಮ್ಮದ್, ಕಾಂಗ್ರೇಸ್ ವಕ್ತಾರ ಹರಿಕೃಷ್ಣ ಬಂಟ್ವಾಳ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ,ಜಿ.ಪಂ ಸದಸ್ಯೆ ಸರಸ್ವತಿ ಕಾಮತ್,ಪಕ್ಷ ಪ್ರಮುಖರಾದ ಪದ್ಮಶೇಖರ್ ಜೈನ್, ಚಂದ್ರಶೇಖರ ಕಾಮತ್ ಸುಳ್ಯ, ಅಬ್ಬಾಸ್ ಆಲಿ, ಪಿಯೂಸ್ ರೋಡ್ರಿಗಸ್,ಜಿನರಾಜ ಆರಿಗ,ಜನಾರ್ಧನ ಚಂಡ್ತಿಮಾರ್,ಸದಾಶಿವ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ,ಸ್ವಾಗತಿಸಿ,ರಿಯಾಝ್ ಕೆಳಗಿನ ಪೇಟೆ ವಂದಿಸಿದರು. ರಾಜೀವ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.

2 (7)

3 (9)

By suddi9

Leave a Reply

Your email address will not be published. Required fields are marked *