ಮುತ್ತೂರು: ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ 2016-17ನೇ ಸಾಲಿನ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಜರಗಿತು.ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಗುರುಪುರ ಪಿ.ಯು.ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಭಾಸ್ಕರ್ ರೈ ಕುಕ್ಕುವಳ್ಳಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ಕಾಟಿಪಳ್ಳ ಪಿ.ಯು.ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಮಮತಾ, “ವಿಕಾಸ” ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭ 100% ಫಲಿತಾಂಶ ಗಳಿಸಿದ ಎಲ್ಲ ಉಪನ್ಯಾಸಕರನ್ನು ಗೌರವಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಹಿರಣ್ಯಾಕ್ಷ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯ ಶ್ರೀ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಶ್ರೀ ಜೆರಾಲ್ಡ್ ಪಿಂಟೋ, ಪ್ರಾಂಶುಪಾಲ ಶ್ರೀ ನಿರಂಜನ್ ಎ., ಮುಖ್ಯೋಪಾಧ್ಯಾಯ ಶ್ರೀ ಸಿಪ್ರಿಯನ್, ಉಪನ್ಯಾಸಕ ವರ್ಗ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
