ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳು ” ಕುರಿತಾದ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮವು ನಡೆಯಿತು. ಶಾಲಾ ಸಂಚಾಲಕರಾದ ಪ್ರಹ್ಲಾದ್.ಜೆ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವೈಕ್ತಿಯಾದ ಖ್ಯಾತ ಪ್ರಸೂತಿ ತಜ್ಞೆಯಾಗಿರುವ ಗೌರಿ ಪೈಯವರು ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿಸಿ. ಶ್ರೀಧರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ.ವಿ.ಶೆಟ್ಟಿ ಹಾಗೂ ಪ್ರಾಥಾಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ದಾನರವರು ಉಪಸ್ಥಿತರಿದ್ದರು.
6 ರಿಂದ 10 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಹದಿಹರೆಯದ ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳ ಕುರಿತು ತಿಳಿಸಿದರು. ನಂತರ ಹೆಣ್ಣು ಮಕ್ಕಳ ವೈಯಕ್ತಿಕ ಸಮಸ್ಯೆಗಳ ಕುರಿತು ವಿದ್ಯಾರ್ಥಿನಿ ಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಮಂಜುಳಾ ಹೆಚ್.ಗೌಡರವರು ಸ್ವಾಗತಿಸಿದರು. ಯಜ್ಞೇಶ್ವರಿ ಎಸ್. ಶೆಟ್ಟಿಯವರು ವಂದಿಸಿದರು. ಸುಧಾ.ಎನ್,ರಾವ್ ಕಾರ್ಯಕ್ರಮ ನಿರೂಪಿಸಿದರು.

