ಮೂಡುಬಿದಿರೆ: ಡಿವೈಎಸ್‍ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಮುನ್ನ ಖಾಸಗಿ ಟಿ.ವಿ. ಮಾಧ್ಯಮದ ಸಂದರ್ಶನದಲ್ಲಿ ನೀಡಿದ ಹೇಳಿಕೆಯಂತೆ ಕರ್ನಾಟಕ ರಾಜ್ಯದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಂತಿ, ಗುಪ್ತದಳದ ಎಡಿಜಿಪಿ ಎಂ.ಎಂ.ಪ್ರಸಾದ್‍ರವರ ವಿರುದ್ಧ ತಕ್ಷಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ ಮೂಡುಬಿದಿರೆ ಕ್ಷೇತ್ರ ಸಮಿತಿಯು ತಹಸೀಲ್ದಾರ್ ಮುಖಾಂತರ, ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ., ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಡಲ ಅಧ್ಯಕ್ಷ ಈಶ್ವರ ಕಟೀಲು, ಪ್ರಧಾನ ಕಾರ್ಯದರ್ಶಿ ಸುಕೇಶ್ ಶಿರ್ತಾಡಿ, ಜಯಾನಂದ ಮೂಲ್ಕಿ, ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಪುರಸಭಾ ಸದಸ್ಯರಾದ ನಾಗರಾಜ ಪೂಜಾರಿ, ದಿನೇಶ್ ಪೂಜಾರಿ, ನಗರ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಹರೀಶ್ ಎಂ.ಕೆ. ಉಪಸ್ಥಿತರಿದ್ದರು.
