ಮಂಗಳೂರು :ಮಂಗಳೂರಿನ ಎಂಆರ್’ಪಿಎಲ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಲಾಲ ಸಮುದಾಯದ ಸಮಾನ ಮನಸ್ಕ ಉದ್ಯೋಗಿಗಳ ಸಮಾಜ ಸೇವಾ ಸಂಘಟನೆ ಅಮೂಲ್ಯ ಸೇವಾ ಪ್ರತಿಷ್ಠಾನದ ವತಿಯಿಂದ ೨೦೧೬ ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ ೧೦ರಂದು ಮಂಗಳೂರು ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಮಾತೃಸಂಘದ ಬಿ.ಎಚ್ ಬಂಗೇರ ಸಭಾ ಭವನದಲ್ಲಿ ಸಭಾಭವನದಲ್ಲಿ ನಡೆಯಿತು.

amoolya
amoolya2

 

amoolya1
ಹತ್ತನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಗಳಿಸಿರುವ ಕುಲಾಲ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಹಾಗೂ ಕ್ರೀಡಾ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಹತ್ತು ವಿದ್ಯಾರ್ಥಿಗಳಿಗೆ ಅಮೂಲ್ಯ ಪ್ರತಿಭಾ ಪುರಸ್ಕಾರ -೨೦೧೬ ನೀಡಿ ಅಭಿನಂದಿಸಲಾಯಿತು. ದ ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದರು. ಮಾತೃ ಸಂಘದ ಅಧ್ಯಕ್ಷರಾದ ಶ್ರೀ ರಾಜೇಂದ್ರಕುಮಾರ್ ಅಳಪೆ, ಅಮೂಲ್ಯ ಪ್ರತಿಷ್ಠಾನದ ಸಮಾಜಮುಖಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

By suddi9

Leave a Reply

Your email address will not be published. Required fields are marked *