ಬಂಟ್ವಾಳ ತಾಲ್ಲೂಕಿನ ಕುಡುಮುನ್ನೂರು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾನುವಾರ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಕೆ. ಸಂಜೀವ ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಧ್ಯಕ್ಷ ಗಣಪತಿ ಭಟ್, ಉಪಾಧ್ಯಕ್ಷೆ ಲೀನಾ ಮಿರಾಂದ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಶಿಶು ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಮಲ್ಲಿಕಾ, ಭಾರತಿ ಕುಂದರ್ ಮತ್ತಿತರರು ಇದ್ದರು.

