ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ವಿಟ್ಲದ ಬಿ ಸಿ ಎಂ ವಿದ್ಯಾರ್ಥಿನಿ ನಿಲಯ ಮತ್ತು ಪರಿಶಿಷ್ಟ ವರ್ಗಗಳ ವಿದೈಅಥಿ ನಿಲಯದ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ಬಗ್ಗೆ ಜನಜಾಗೃತಿ ಕಾರ್ಯಾಗಾರವನ್ನು ವಿದ್ಯಾರ್ಥಿ ನಿಲಯದ ಸಭಾಭವನದಲ್ಲಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಪ್ರಶಾಂತ್ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸುರ್ಶನ ಪಡಿಯಾರ್ ಕಾರ್ಯದರ್ಶಿ ಮೋಹನ್, ಸದಸ್ಯ ಖಲಂದರ್, ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

