ಬಂಟ್ವಾಳ:ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ವತಿಯಿಂದ ಇದೇ ಜು.31ರಂದು ಬೆಳಿಗ್ಗೆ 10.30 ಗಂಟೆಗೆ ಪಾಣೆಮಂಗಳೂರು ಸುಮಂಗಲಾ ಸಮುದಾಯ ಭವನದಲ್ಲಿ ಸ್ವಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಸಂಘದ ಜಿಲ್ಲಾಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎಂ.ನಾರಾಯಣ ಸಪಲ್ಯ, ಉದ್ಯಮಿ ಎ.ಕೆ.ಸುಂದರ ಸಾಲ್ಯಾನ್, ಮಾಧವ ಎಸ್.ಮಾವೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯಿತಿ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
