ವಿಟ್ಲ:ಸರಕಾರಿ ಮಾದರಿ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರಸ್ತುತ ಶೈಕ್ಷಣಿಕ ಅಗತ್ಯಗಳ ಬಗ್ಗೆ ಚರ್ಚೆ ನಡೆಯಿತು. ವಿದ್ಯಾರ್ಥಿಗಳ ಜೀವನದಲ್ಲಿ ಪೋಷಕರ ಹಾಗೂ ಶಿಕ್ಷಕರ ಪಾತ್ರದ ಬಗ್ಗೆ ಮುಖ್ಯ ಅತಿಥಿಗಳಾದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀ ನಾರಾಯಣ ಗೌಡ ಇವರು ಸಾಂದರ್ಭಿಕವಾಗಿ ಮಾತನಾಡಿದರು.SHV_6669

SHV_6670 (1)

ಸಭಾಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾದ ಶ್ರೀ ಸುರೇಶ್ ಕುಮಾರ್ ವದ್ವ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ತಜ್ಞರಾದ ಶ್ರೀ ಅನಂತಕೃಷ್ಣ ಹೆಬ್ಬಾರರು ಉಪಸ್ಥಿತರಿದ್ದರು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಮೋಹನ್ ರಾಜ್ ಸ್ವಾಗತಿಸಿ, ಸಹಶಿಕ್ಷಕರಾದ ಶ್ರೀ ವಿಶ್ವನಾಥ ಗೌಡ ಕಾರ್ಯಕ್ರಮ ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *