ಸುರತ್ಕಲ್: ಬಂಟರ ಸಂಘ ಸುರತ್ಕಲ್ ಮತ್ತು ಬಂಟರ ಮಹಿಳಾ ವೇದಿಕೆಯ ಸಹಯೋಗದಲ್ಲಿ ಜುಲೈ 31ರಂದು ಭಾನುವಾರ ಬೆಳಿಗ್ಗೆ 9ಗಂಟೆಗೆ ಸುರತ್ಕಲ್ ಬಂಟರಭವನದಲ್ಲಿ ‘ಆಟಿದ ಪೆÇರ್ಲು’ ಹಾಗೂ `ನಿವೇಶನ ನಿಧಿ’ಗೆ ಚಾಲನೆ ಕಾರ್ಯಕ್ರಮ ಜರಗಲಿದೆ. ಸಭಾ ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಉಲ್ಲಾಸ್ ಆರ್.ಶೆಟ್ಟಿ ವಹಿಸಲಿದ್ದಾರೆ. ‘ನಿವೇಶನ ನಿಧಿಗೆ’ ಚಾಲನೆಯನ್ನು ಮುಂಬಾಯಿ ಹೊಟೇಲ್ ಉದ್ಯಮಿ ಕುಶಲ ಭಂಡಾರಿ ಐಕಳ ಬಾವ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಲೀಡ್ಸ್‍ಗ್ರೂಪ್‍ನ ಮಾಲಕ ಕಿಶೋರ್ ಡಿ.ಶೆಟ್ಟಿ, `ಅಮ್ಮನೆಡೆಗೆ ನಮ್ಮ ನಡೆ’ಯ ಅಧ್ಯಕ್ಷ ಸಂದೀಪ್ ಶೆಟ್ಟಿ ಮಳವೂರು, ಸಂಘದ ಮಾಜಿ ಅಧ್ಯಕ್ಷ ಎಂ.ದೇವಾನಂದ ಶೆಟ್ಟಿ ಮಹಿಳಾ ವೇದಿಕೆಯ ಅಧ್ಯಕ್ಷೆ ಚಂದ್ರಕಲಾ ಬಿ.ಶೆಟ್ಟಿ ಭಾಗವಹಿಸಲಿದ್ದಾರೆ.
ಸನ್ಮಾನ
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಸನ್ಮಾನಿಸಲಾಗುವುದು. ಸಹಕಾರಿ ಕ್ಷೇತ್ರದಲ್ಲಿ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಶೆಟ್ಟಿ ಕಟ್ಲ, ಶೈಕ್ಷಣಿಕ ಕ್ಷೇತ್ರದಲ್ಲಿ ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟ್‍ನ ಅಧ್ಯಕ್ಷ ಸಾಧ ಪೂಜಾರಿ ಕುಳಾಯಿ, ಕೃಷಿ ಕ್ಷೇತ್ರದಲ್ಲಿ ಕುತ್ತೆತ್ತೂರು ಪಡುಬೆಟ್ಟು ಬಾಲಕೃಷ್ಣ ಶೆಟ್ಟಿ, ಕಲಾ ಕ್ಷೇತ್ರದಲ್ಲಿ ಶಾರದಾ ಆಟ್ರ್ಸ್‍ನ ಕೆ.ಪದ್ಮನಾಭ ದೇವಾಡಿಗ, ಶಿಕ್ಷಣ ಕ್ಷೇತ್ರದಲ್ಲಿ ಲಯನ್ಸ್ ಸ್ಪೆಷಲ್ ಸ್ಕೂಲ್‍ನ ಮುಖ್ಯ ಶಿಕ್ಷಕಿ ಮೀರಾ ಸತೀಶ್ ಅವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ ಎಂದು ಸುರತ್ಕಲ್ ಬಂಟರ ಸಂಘದ ಪ್ರಕಟಣೆ ತಿಳಿಸಿದೆ.
