ಬಂಟ್ವಾಳ : ತಾಲೂಕಿನ ನರಿಂಗಾನ ಹಿರಿಯ ಪ್ರಾಥಮಿಕ ಶಾಲೆಯ ಮೂರು ಮಂದಿ ಶಿಕ್ಷಕರನ್ನು ಹೆಚ್ಚುವರಿ ಎಂಬ ನೆಲೆಯಲ್ಲಿ ವರ್ಗಾವಣೆಗೊಳಿಸಿರುವುದನ್ನು ವಿರೋಧಿಸಿ ಸಾರ್ವಜನಿಕರು ಶಾಲಾ ಮುಂಭಾಗದ ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ ರಝಾಕ್ ಮೊಂಟೆಪದವು ಅವರು ಶಿಕ್ಷಕರ ದಿಢೀರ್ ವರ್ಗಾವಣೆಯಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದ್ದು, ಬಡ ವಿದ್ಯಾರ್ಥಿಗಳ ಜೊತೆ ಶಿಕ್ಷಣ ಇಲಾಖೆ ಚೆಲ್ಲಾಟ ಆಡುತ್ತಿದೆ ಎಂದು ಆರೋಪಿಸಿದರು. ಶಿಕ್ಷಣ ವರ್ಗಾವಣೆ ಆದೇಶ ಹಿಂಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.26bntph3
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಅಬೂಬಕ್ಕರ್, ಸ್ಥಳೀಯ ಗ್ರಾ ಪಂ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಸದಸ್ಯರಾದ ಇಸ್ಮಾಯಿಲ್ ಮೋನು, ಫಯಾಝ್, ಅಬ್ದುಲ್ ರಹಿಮಾನ್, ಪ್ರಮುಖರಾದ ಸಂಶುದ್ದೀನ್ ಯು ಟಿ, ಹಸನ್ ಕುಂಞÂ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ : 26ಬಿಎನ್‍ಟಿಪಿಎಚ್3 : ನರಿಂಗಾನ ಶಾಲಾ ಶಿಕ್ಷಕರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

By suddi9

Leave a Reply

Your email address will not be published. Required fields are marked *